ಬೆಂಗಳೂರು : ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧಾನಸಭೆಯಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕುವ ಮೂಲಕ ಕನಾಟಕದಲ್ಲಿ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ. ವಿಧಾನಸಭಾ ಕಲಾಪಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಸುದ್ದಿಯಾಗಿದ್ದ ಸ್ಪೀಕರ್ ಕಾಗೇರಿ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಸ್ಪೀಕರ್‍ಗೆ ಸಲಹೆಗಾರನನ್ನು ನೇಮಿಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟು ಹಾಕಿದ್ದು, ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಅವರನ್ನು ತಮ್ಮ ಸಲಹೆಗಾರನಾಗಿ ನೇಮಿಸಿಕೊಂಡಿದ್ದಾರೆ. ಸ್ಪೀಕರ್ ಅವರ ಈ ಬೆಳವಣಿಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಅವರನ್ನು ತಮ್ಮ ಸಲಹೆಗಾರನಾಗಿ ನೇಮಿಸಿಕೊಂಡಿರುವುದು ಹಾಲಿ ಅಧಿಕಾರಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸ್ಪೀಕರ್ ನಿರ್ಧಾರಕ್ಕೆ ವಿಧಾನಸಭೆ ಸಚಿವಾಲಯದಲ್ಲೂ ಆಕ್ರೋಶ ವ್ಯಕ್ತವಾಗಿದೆ.










