ಬೆಂಗಳೂರು : 2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023” ರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನೇಮಿಸಿದೆ. ಮುಂಬರುವ ಚುನಾವಣೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದ್ದು, ಮಧು ಬಂಗಾರಪ್ಪ ಹಾಗೂ ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.











