ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವು ತಿಂಗಳು ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿ ಪ್ರಕಟಿಸಿದರು.
ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು. ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಟ್ಟಿದ್ದಾರೆ.










