ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಆಯ್ಕೆ…

78
firstsuddi

ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇಂದು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾವನೆ ಮಾಡಿದರು. ಸಿಎಂ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನುಮೋದಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ಅಭಿನಂದಿಸಿ ಅವರು ನಡೆಬಂದ ರಾಜಕೀಯ ಹಾದಿಯನ್ನು ಮೆಲುಕು ಹಾಕಿದರು. ಅಲ್ಲದೇ ಸ್ಪೀಕರ್ ಯುಟಿ ಖಾದರ್ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಮಾತನಾಡಿದರು.

ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ ಅವರು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಸ್ಪೀಕರ್ ಯು.ಟಿ. ಖಾದರ್​ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ. ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದು ಹೇಳಿದರು.