ನನ್ನ ಪ್ರಾಣ ಹೋದರು ಮೆಡಿಕಲ್ ಕಾಲೇಜು ಮಾತ್ರ ಬಿಟ್ಟುಕೊಡುವುದಿಲ್ಲ : ಡಿ.ಕೆ. ಶಿವಕುಮಾರ್.

870
firstsuddi

ಬೆಂಗಳೂರು : ನನ್ನ ಪ್ರಾಣ ಹೋದರು ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಕನಕಪುರದಲ್ಲಿ ಆಗಬೇಕು ಎಂದು ಈಗಾಗಲೇ ನಮ್ಮ ಸರ್ಕಾರದಲ್ಲಿ ತೀರ್ಮಾನಿಸಲಾಗಿದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ರದ್ದು ಮಾಡಿ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ಈ ಧೋರಣೆ ಸರಿಯಲ್ಲ. ಮೆಡಿಕಲ್ ಕಾಲೇಜು ನನ್ನ ಕನಸಿನ ಯೋಜನೆ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಬಗ್ಗೆ ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಹೋದರು ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಬಿಟ್ಟುಕೊಡುವುದಿಲ್ಲ ಎಂದರು.