ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ 1998ರಲ್ಲಿ ಜೆಡಿಎಸ್ ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.
ಮಂಡ್ಯ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ಇವರು ಮೈಶುಗರ್ ಅಧ್ಯಕ್ಷರೂ ಆಗಿದ್ದರು. ಇಂದು ಸಂಜೆ 4 ಗಂಟೆಗೆ ತಮ್ಮ ಹುಟ್ಟೂರಾದ ಇಂಡುವಾಳು ಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಹೆಚ್.ಹೊನ್ನಪ್ಪ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.










