ವಿನಯ್ ಕುಲಕರ್ಣಿ ಅವರನ್ನು 3 ದಿನ ಸಿಬಿಐ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ…

133
firstsuddi

ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇನ್ನೂ 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ವೇಳೆ ಸಿಬಿಐ ಪರ ವಕೀಲರು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಕಸ್ಟಡಿಗೆ ವಹಿಸುವಂತೆ ವಾದ ಮಂಡಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ಧಾರವಾಡದ 32ನೇ ಸೆಷನ್ಸ್ ಕೋರ್ಟ್ ವಿನಯ್ ಕುಲಕರ್ಣಿ ಅವರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.