ವಿನಯ್ ಕುಲಕರ್ಣಿ ಜೈಲಿನಿಂದ ರಿಲೀಸ್…

58
firstsuddi

ಬೆಳಗಾವಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಇಂದು ತಾಲ್ಲೂಕಿನ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾಕ್ಷ್ಯ ನಾಶ ಪ್ರಕರಣದಲ್ಲೂ ಬೇಲ್ ನೀಡಿತ್ತು. ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.