ವಿಪಕ್ಷಗಳ ಗದ್ದಲದ ನಡುವೆಯೂ ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021’ ಅಂಗೀಕಾರ…

72
firstsuddi

ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021’ 2021’ಯನ್ನು ಅಂಗೀಕರಿಸಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮಸೂದೆಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಸಬೇಕೆಂದು ಪಟ್ಟು ಹಿಡಿದಿದ್ದರು. ಈ ನಡುವೆಯೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ ‘ಯನ್ನು ಮಂಡಿಸಿದ್ದು, ಲೋಕಸಭೆ ಈ ಮಸೂದೆಯನ್ನು ಅಂಗೀಕರಿಸಿದೆ.

ಆದರೆ, ಯಾವುದೇ ಚರ್ಚೆ ಮಾಡದೇ ಮಸೂದೆ ಅಂಗೀಕರಿಸಿದ್ದಕ್ಕೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದು, ರಾಜ್ಯಸಭೆಯಲ್ಲಿ ರದ್ದತಿ ಮಸೂದೆ ಮಧ್ಯಾಹ್ನ 2:00 ಗಂಟೆಗೆ ಮಂಡಾನೆಯಾಗಲಿದೆ.