ವಿಪಕ್ಷ ನಾಯಕ ಸಿದ್ದರಾಮಯ್ಯ ಕಿರಿಯ ಸಹೋದರ ನಿಧನ…

132
firstsuddi

ಮೈಸೂರು : ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಿರಿಯ ಸಹೋದರ ರಾಮೇಗೌಡ(67) ಅವರು ನಿನ್ನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ರಾಮೇಗೌಡ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ, ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಹೋದರರು ಇದ್ದಾರೆ. ಇಂದು ಮಧ್ಯಾಹ್ನ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.