ವಿಪಕ್ಷ ನಾಯಕ ಸಿದ್ದರಾಮಯ್ಯ ಗುಣಮುಖ ; ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್…

217
firstsuddi

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯನವರು ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನಲೆ ಜೂನ್ 1 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ಮಧ್ಯೆ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದೆ. ಆದರೆ ಸಿದ್ದರಾಮಯ್ಯ ವೈರಲ್ ಫೀವರ್ ನಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ 6 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದಿದ್ದು, ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಒಂದು ವಾರಗಳ ಕಾಲ ಸಿದ್ದರಾಮಯ್ಯನವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.