ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್​ನಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಭಾರೀ ಅನಾಹುತ…

57
firstsuddi

ನವದೆಹಲಿ : ದಿಬ್ರುಗಢದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ ಗೆ ಬೆಂಕಿ ಹತ್ತಿಕೊಂಡಿದೆ. ಗುರುವಾರ(ನಿನ್ನೆ) ಈ ಘಟನೆ ನಡೆದಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ಫ್ಲೈಟ್ 6ಇ 2037 ಅಸ್ಸಾಂನ ದಿಬ್ರುಗಢ್ ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್ ನಿಂದ ಬೆಂಕಿಯ ಕಿಡಿ ಮತ್ತು ಹೊಗೆ ಹೊರಗೆ ಹೋಗುತ್ತಿರುವುನ್ನು ಗಮನಿಸಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ಗುರುವಾರ(ನಿನ್ನೆ) ಮಧ್ಯಾಹ್ನ 12.45ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಸಿಬ್ಬಂದಿಗೆ ಇಂತಹ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ತರಬೇತಿ ನೀಡಲಾಗಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.