ವಿಮಾನದಲ್ಲಿ ಮದ್ಯ ಸೇವಿಸಿ ಅನುಚಿತ ವರ್ತನೆ – ಇಬ್ಬರು ಪ್ರಯಾಣಿಕರ ಬಂಧನ…

52
firstsuddi

ಪಾಟ್ನಾ: ದೆಹಲಿ-ಪಾಟ್ನಾ ವಿಮಾನದಲ್ಲಿ ಕುಡಿದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಮದ್ಯದ ಅಮಲಿನಲ್ಲಿ ಮೂವರು ವ್ಯಕ್ತಿಗಳು ದೆಹಲಿಯಿಂದ ಪಾಟ್ನಾಗೆ ಬರುತ್ತಿದ್ದ ಇಂಡಿಗೋ ವಿಮಾನದ ಗಗನಸಖಿ ಮತ್ತು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಕೆಲವು ಪ್ರಯಾಣಿಕರು ವಿರೋಧಿಸಿದ್ದಾರೆ. ಗಗನಸಖಿ ಅವರನ್ನು ಸಮಾಧನ ಮಾಡಲು ಮುಂದಾದಾಗ, ಇಬ್ಬರೂ ಅವರೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದಾರೆ.

ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಯುವಕರು ಹಾಜಿಪುರ ನಿವಾಸಿಗಳಾದ ನಿತೀಶ್ ಕುಮಾರ್ ಮತ್ತು ರೋಹಿತ್ ಎಂದು ಗುರುತಿಸಲಾಗಿದೆ. ಇದರಲ್ಲಿ ಆತನ ಮೂರನೇ ವ್ಯಕ್ತಿ ವಿಮಾನ ನಿಲ್ದಾಣ ತಲುಪಿದ ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಆತನ ಹೆಸರು ಪಿಂಟು ಎಂದು ಹೇಳಲಾಗುತ್ತಿದೆ.

ಈ ಸಂಬಂಧ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.