ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ!

40
firstsuddi

ವಾಷಿಂಗ್ಟನ್ : ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಅಮೆರಿಕನ್ ಏರ್‌ಲೈನ್ಸ್ ನ AA-292 ವಿಮಾನವು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿತ್ತು. ಈ ವೇಳೆ ಭಾರತದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಸಂಬಂಧ ಅಮೆರಿಕನ್ ಏರ್‌ಲೈನ್ಸ್ ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ದೆಹಲಿ ವಿಮಾನ ನಿಲ್ದಾಣಕ್ಕೆ ವಿಷಯ ವರದಿ ಮಾಡಿತ್ತು. ಭಾನುವಾರ ರಾತ್ರಿ 9 ಗಂಟೆಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಆರೋಪಿಯನ್ನ ಬಂಧಿಸಲಾಗಿದೆ.

ವಿಮಾನಯಾನ ಸಂಸ್ಥೆ ಸಹಪ್ರಯಾಣಿಕನ ಹೇಳಿಕೆಯನ್ನ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ನಾಗರಿಕ ವಿಮಾನಯಾನ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ವಿಮಾನ ಪ್ರಯಾಣಿಕರು ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಸಾಕಷ್ಟು ಘಟನೆ ನಡೆದಿವೆ. ಅಮೆರಿಕನ್ ಏರ್‌ಲೈನ್ಸ್ ನಲ್ಲೇ ಎರಡು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.