ನವದೆಹಲಿ : ಬೆಂಗಳೂರಿನಿಂದ ಜೈಪುರಕ್ಕೆ ಹಾರಾಟ ಮಾಡುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರು ನಗರದಿಂದ ಜೈಪುರಕ್ಕೆ ಸಂಚರಿಸುತ್ತಿದ್ದ ವೇಳೆ ವಿಮಾನದಲ್ಲಿ ಮಹಿಳೆಗೆ ಹೆರಿಗೆನೋವು ಕಾಣಿಸಿಕೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಸುಬಾಹಾನ ನಜೀರ್ ಅವರು ಮಹಿಳೆಗೆ ಚಿಕಿತ್ಸೆ ನೀಡಿ ಸುರಕ್ಷಿತ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಇಂಡಿಗೋ ವಿಮಾನಯಾನ ಸಂಸ್ಥೆ, 6ಇ 469 ಹೆಸರಿನ ವಿಮಾನ ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದಾಗ ಮಹಿಳೆಗೆ ಹೆರಿಗೆನೋವು ಕಾಣಿಸಿಕೊಂಡಿದೆ. ಕೂಡಲೇ ವಿಮಾನದ ಸಿಬ್ಬಂದಿ ಮತ್ತು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಸುಬಾಹಾನ ನಜೀರ್ ಅವರು ಸಹಕರಿಸಿದ್ದಾರೆ ಎಂದು ತಿಳಿಸಿದೆ.
ಇನ್ನು ವಿಮಾನ ಜೈಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅವರನ್ನ ನೇರವಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಇದೀಗ ತಾಯಿ ಮತ್ತು ಮಗು ಕ್ಷೇಮವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.










