ಬೆಂಗಳೂರು : ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಆರ್. ಶಂಕರ್ ಅವರು ವಿರೋಧ ಪಕ್ಷದ ಕಡೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಇಬ್ಬರೂ ಶಾಸಕರು ಲೋಕಸಭಾ ಚುನಾವಣೆಯ ಬಳಿಕ ಆಡಳಿತ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಘೋಷಣೆ ಮಾಡಿದ್ದರು. ಆದರೆ ಜುಲೈ 8ರಂದು ರಾಜ್ಯಪಾಲರನ್ನು ಭೇಟಿಯಾಗಿ ತಾವು ನೀಡಿರುವ ಬೆಂಬಲವನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ನಾವು ಆಡಳಿತ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದೇವೆ. ಹೀಗಾಗಿ ನಮಗೆ ವಿರೋಧ ಪಕ್ಷದ ಕಡೆ ಆಸನ ವ್ಯವಸ್ಥೆ ಮಾಡಿಕೊಡುವಂತೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.










