ಹುಬ್ಬಳ್ಳಿ : ವಿವಾದಿತ ಪೋಸ್ಟ್ ಹಾಕಿ ಕೋಮುಗಲಭೆಗೆ ಕಾರಣವಾದ ಯುವಕ ಅಭಿಷೇಕ್ ಹಿರೇಮಠಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಭಿಷೇಕ ಹಿರೇಮಠನನ್ನು ಹುಬ್ಬಳ್ಳಿಯ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರುಪಡಿಸಲಾಗಿತ್ತು. ಹುಬ್ಬಳ್ಳಿಯ ಜೆ.ಎಂ.ಎಫ್.ಸಿ ಕೋರ್ಟ್ ಆರೋಪಿಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೂ ಗಲಭೆಗೆ ಕಾರಣವಾಗಿದ್ದ ಅಭಿಷೇಕ್ ಹಿರೇಮಠ್ ಪರವಾಗಿ ಅವರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಾಳೆ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಕೆಯಾಗಲಿದ್ದು, ಆರೋಪಿಗೆ ಜಾಮೀನು ನೀಡಬೇಕಾ, ಬೇಡವಾ ಎಂಬ ಬಗ್ಗೆ ನಿರ್ಧಾರವಾಗುತ್ತದೆ.
ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್ ಮಾಡಿ ಅಭಿಷೇಕ್ ಹಿರೇಮಠ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು. ಈ ವಿವಾದಿತ ಪೋಸ್ಟ್ ಹಿನ್ನೆಲೆ ಹಳೇ ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.










