ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ವೈರಲ್- ಮನನೊಂದು ಇಬ್ಬರೂ ಆತ್ಮಹತ್ಯೆ…

70
firstsuddi

ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಿಂದ ಮನನೊಂದು ಮಹಿಳೆ ಮತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಪಟ್ಟಣದ ಕಲ್ಗುಣಿಗೆ ನಿವಾಸಿಗಳಾದ 28 ವರ್ಷದ ವಿವಾಹಿತೆ ಶೃತಿ ಮತ್ತು 20 ವರ್ಷದ ಮುರಳಿ ಎಂದು ಗುರುತಿಸಲಾಗಿದೆ.

ಮುರಳಿ ಮತ್ತು ಶೃತಿ ಸ್ನೇಹಿತರಾಗಿದ್ದು, ಮುರಳಿ ಶೃತಿಯೊಂದಿಗೆ ಫೋಟೋ ತೆಗೆದುಕೊಂಡಿದ್ದನು. ನಂತರ ಈ ಫೋಟೋವನ್ನು ಆತನ ಸ್ಟೇಟಸ್‌ಗೆ ಅಪ್‌ಲೋಡ್ ಮಾಡಲಾಗಿತ್ತು. ನಂತರ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ತಿಳಿದಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಮನನೊಂದ ಗೃಹಿಣಿ ಶೃತಿ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ.

ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.