ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ…

157
firstsuddi

ಬೆಂಗಳೂರು : ಸಿಐಟಿಯು ನಾಯಕಿ ವರಲಕ್ಷ್ಮಿ ಅವರ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಆಹೋರಾತ್ರಿ ಪ್ರತಿಭಟನೆ ನಡೆಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡದೆ ಇದ್ದರೂ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸಿಐಟಿಯು ನಾಯಕಿ ವರಲಕ್ಷ್ಮಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಖಾಸಗೀಕರಣ ಕೈ ಬಿಡಬೇಕು, ವೇತನ ಹೆಚ್ಚಳದೊಂದಿಗೆ ನಿವೃತ್ತಿ ವೇತನ ನೀಡಬೇಕು ಎಂದು ವಿವಿಧ ಬೇಡಿಕೆಗಳನ್ನ ಸರ್ಕಾರದ ಮುಂದೆ ಇಟ್ಟಿದ್ದಾರೆ.