ವಿವಿಧ ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ…

184
firstsuddi

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತರು ಇಂದು ಮತ್ತು ನಾಳೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಬಿಸಿಯೂಟ ಕಾರ್ಯಕರ್ತರು ಕನಿಷ್ಠ ವೇತನ, ಕಾಯಂ ನೌಕರಿ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಗದಗ, ಶಿವಮೊಗ್ಗ, ಚಿತ್ರದುರ್ಗ, ಹುಬ್ಬಳ್ಳಿ ಜಿಲ್ಲಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.