ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ಮಾರ್ಷ್- ತೀವ್ರ ಆಕ್ರೋಶ ವ್ಯಕ್ತ…

102
firstsuddi

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು.

ವಿಶ್ವಕಪ್‌ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡಿದ್ದು ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ. ಕೆಲ ಪ್ಲೇಯರ್ಸ್ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಆದರೆ, ಆಸೀಸ್ ಆಟಗಾರ ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಟ್ರೋಫಿಗೆ ಅಗೌರವ ಸೂಚಿಸಿರುವ ಮಿಚೆಲ್ ನಡೆಯನ್ನು ಜನ ಖಂಡಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.