ವಿಶ್ವದ ನಂ.1 ಶ್ರೀಮಂತ ಸ್ಥಾನ ಮರಳಿ ಪಡೆದ ಎಲಾನ್ ಮಸ್ಕ್…

58
firstsuddi

ವಾಷಿಂಗ್ಟನ್ : ಟೆಸ್ಲಾ ಹಾಗೂ ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ಇದೀಗ ಮತ್ತೊಮ್ಮೆ ವಿಶ್ವದ ನಂ.1 ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಲೂಯಿ ವಿಟಾನ್ ನ ಸಿಇಒ ಬರ್ನಾರ್ಡ್ ಅರ್ನಾಲ್ಟ್ ಅವರು ಎಲಾನ್ ಮಸ್ಕ್ ಅವರನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಸ್ಥಾನವನ್ನು ಪಡೆದಿದ್ದರು. ಇದೀಗ 2 ತಿಂಗಳು ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಮಸ್ಕ್ ಮತ್ತೆ ಮೊದಲನೇ ಸ್ಥಾನಕ್ಕೆ ಮರಳಿದ್ದಾರೆ.

ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ನ ಪ್ರಕಾರ, ಮಸ್ಕ್ ಸಂಪತ್ತಿನ ನಿವ್ವಳ ಮೌಲ್ಯವು 187.1 ಬಿಲಿಯನ್ ಡಾಲರ್ (ಸುಮಾರು 15.46 ಲಕ್ಷ ಕೋಟಿ ರೂ.) ಆಗಿದ್ದು, 185.3 ಬಿಲಿಯನ್ ಡಾಲರ್ (ಸುಮಾರು 15.29 ಲಕ್ಷ ಕೋಟಿ ರೂ.) ಸಂಪತ್ತಿನ ಮೌಲ್ಯ ಹೊಂದಿರುವ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ.