ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ.

49
firstsuddi

ವಾಷಿಂಗ್ಟನ್ : ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್ ನ ಅಧ್ಯಕ್ಷ ಗೌತಮ್ ಅದಾನಿ ಅವರು ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಕಳೆದ ತಿಂಗಳಷ್ಟೇ ಅದಾನಿ ಅವರು ಲೂಯಿ ವಿಟಾನ್ ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ 3ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದರು. ಇದೀಗ ಅಮೆಜಾನ್ ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್(ಸುಮಾರು 21 ಲಕ್ಷ ಕೋಟಿ ರೂ.) ನಿವ್ವಳ ಆಸ್ತಿ ಹೊಂದಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ಗೌತಮ್ ಅದಾನಿ ಅವರು ಪ್ರಸ್ತುತ 154.7 ಬಿಲಿಯನ್ ಡಾಲರ್(12.33 ಲಕ್ಷ ಕೋಟಿ ರೂ.) ಆಸ್ತಿಯನ್ನು ಹೊಂದಿದ್ದು, ವಿಶ್ವದ 2ನೇ ಶ್ರೀಮಂತ ವ್ಯಕ್ತಿಯೆನಿಸಿಕೊಂಡಿದ್ದಾರೆ.

ಅರ್ನಾಲ್ಟ್ ಅವರ ಒಟ್ಟು ನಿವ್ವಳ ಮೌಲ್ಯ 153.5 ಬಿಲಿಯನ್ ಡಾಲರ್(12.24 ಲಕ್ಷ ಕೋಟಿ ರೂ.) ಇದ್ದು, 3ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬೆಜೋಸ್ ಅವರ ಆಸ್ತಿ 149.7 ಬಿಲಿನ್ ಡಾಲರ್ ಗೆ(11.93 ಲಕ್ಷ ಕೋಟಿ ರೂ.) ಕುಸಿತವಾಗಿದ್ದು, 4ನೇ ಸ್ಥಾನದಲ್ಲಿದ್ದಾರೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ 92 ಬಿಲಿಯನ್ ಡಾಲರ್(7.33 ಲಕ್ಷ ಕೋಟಿ ರೂ.) ಆಸ್ತಿ ಹೊಂದಿದ್ದು, 8ನೇ ಸ್ಥಾನದಲ್ಲಿದ್ದಾರೆ.