ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಶಾಸಕರೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಇಂದು ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತ. ನಾವು 105 ಮಂದಿ ಶಾಸಕರಿದ್ದೇವೆ. ಇಬ್ಬರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಿರುವುದರಿಂದ ನಮ್ಮ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ನಾವು ಸರ್ಕಾರ ರಚನೆ ಮಾಡುವುದು ಖಚಿತ. ಮೈತ್ರಿ ಸರ್ಕಾರದ ಸಂಖ್ಯಾಬಲ ನೂರಕ್ಕಿಂತ ಕಡಿಮೆ ಇದ್ದು, ಹೀಗಾಗಿ ಇಂದು ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತ ಎಂದು ಹೇಳಿದ್ದಾರೆ.