ಬೆಂಗಳೂರು : ಇಂದು ವಿಶ್ವಾಸ ಮತಯಾಚನೆ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಬಂದೋಬಸ್ತ್‍ಗಾಗಿ ಸಾವಿರ ಪೊಲೀಸರನ್ನು ನೇಮಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ವಿಧಾನಸೌಧ ಹಾಗೂ ರಾಜಭವನದ ಸುತ್ತಮುತ್ತ ಐದು ಸಾವಿರ ಪೊಲೀಸರನ್ನು ನಿಯೋಜಿಸಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ ಯಾವುದೇ ಪ್ರತಿಭಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಹಾಗೂ ಅತೃಪ್ತ ಶಾಸಕರ ಮನೆಗಳ ಮುಂದೆಯೂ ಭದ್ರತೆ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ದೋಸ್ತಿ ಸರ್ಕಾರದ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಸರ್ಕಾರ ಉಳಿಯುತ್ತೋ? ಉರುಳುತ್ತೋ? ಎಂಬ ಆತಂಕ ಶುರುವಾಗಿದೆ.










