‘ವಿಷಕನ್ಯೆ’ಯಿಂದ ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ : ರಮೇಶ್ ಜಾರಕಿಹೊಳಿ.

43
firstsuddi

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಓರ್ವ ‘ವಿಷಕನ್ಯೆ’ಯಿಂದ ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಓರ್ವ ‘ವಿಷಕನ್ಯೆ’ಯಿಂದ ಇವತ್ತು ಕಾಂಗ್ರೆಸ್ ಪಕ್ಷ ಹಾಳಾಗ್ತಿದೆ. ಒಂದು ವೇಳೆ ರಾಜ್ಯದಲ್ಲಿ ಜಾತಿ ಸಂಘರ್ಷ ಆದರೂ ಅದಕ್ಕೆ ಡಿಕೆ ಶಿವಕುಮಾರ್ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿಯೇ ಕಾರಣ ಎಂದು ಆರೋಪಿಸಿದ್ದಾರೆ.

ನನ್ನ ವಿರುದ್ಧ 40 ಕೋಟಿ ರೂ. ನೀಡಿ ಸಿಡಿ ಷಡ್ಯಂತ್ರ ಮಾಡಿದ್ದು ಡಿಕೆಶಿನೇ. ನನ್ನ ಸಿಡಿ ಮಾತ್ರವಲ್ಲದೇ ನೂರಾರು ಸಿಡಿ ಮಾಡಿದ್ದಾರೆ. ಸಾಕಷ್ಟು ಅಧಿಕಾರಿಗಳು ಅವರ ಜಾಲದಲ್ಲಿ ಸಿಲುಕಿದ್ದಾರೆ. ಇದು ಗಂಭೀರವಾದ ವಿಷಯ. ರಾಜ್ಯ ಸರ್ಕಾರ ತಕ್ಷಣ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಡಿಕೆ ಶಿವಕುಮಾರ್ ರಾಜಕಾರಣದಲ್ಲಿ ಇರಲು ನಾಲಾಯಕ್. ಎಲ್ಲಾ ಆಯಾಮದಲ್ಲೂ ತನಿಖೆ ಆಗಬೇಕು. ಜೊತೆಗೆ ನನ್ನ ವಿರುದ್ಧ ಸಿಡಿಗೆ ಸಹಕರಿಸಿದ ಯುವತಿಯನ್ನೂ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಡಿಕೆ ಶಿವಕುಮಾರ್ ಅವರು ಸಿಡಿ ಬಿಡುಗಡೆ ಮಾಡಿದ ಬಳಿಕವೂ ರಾಜಿಯಾಗಲು ಮುಂದಾಗಿದ್ದರು. ಆದರೆ ನಾನು ಒಪ್ಪಲಿಲ್ಲ. ಈಗ ಡಿಕೆ ಶಿವಕುಮಾರ್ ತಮ್ಮ ಗರ್ಲ್ ಫ್ರೆಂಡ್ ಜೊತೆಗೆ ನನ್ನ ಹತ್ತಿರ ದುಬೈನಲ್ಲಿ, ಲಂಡನ್ನಲ್ಲಿ ಮನೆಯಿದೆ. ಸಾವಿರಾರು ಕೋಟಿ ಹಣ ಇದೆ ಎಂದು ಹೇಳಿಕೊಂಡಿರುವ ಆಡಿಯೋ ನನ್ನ ಬಳಿಯಿದೆ. ಇದೆಲ್ಲವನ್ನೂ ಸಿಬಿಐ ತನಿಖೆಗೆ ಒಪ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಡಿಕೆಶಿ ಆಸ್ಪತ್ರೆಯಲ್ಲಿದ್ದಾಗ ನಾನು ನೋಡಲು ಹೋಗಿದ್ದೆ, ಆಗ ಡಿಕೆಶಿ ಪತ್ನಿ ಪಾರ್ಟಿ ಬಿಡಬೇಡ ಅಣ್ಣ ಎಂದು ಮನವಿ ಮಾಡಿದ್ದರು. ಅವಾಗ ನಾನು ಇಲ್ಲ ತಂಗಿ ನಿಮ್ಮ ಯಜಮಾನ್ರು ಸರಿಯಿಲ್ಲ ಎಂದಿದ್ದೆ. ಡಿಕೆಶಿ ಅಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಕೊಡಬೇಡ ಎಂದಿದ್ದರು. ನಾನೇ ಮುಂದೆ ನಿಂತು ಒತ್ತಾಯ ಮಾಡಿ ಟಿಕೆಟ್ ಕೊಡಿಸಿದ್ದೆ. ಈಗ ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಡಿಕೆಶಿ ಬ್ಲ್ಯಾಕ್ ಆಂಡ್ ವೈಟ್ ದಂಧೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ವಿರುದ್ಧ ಅಶ್ಲೀಲ ವಿಡಿಯೋನಲ್ಲಿ ಮಾಡಿದ್ದ ಯುವತಿ ಬೆಂಗಳೂರಿನ ಕಾಂಗ್ರೆಸ್ ಮಹಿಳಾ ಪದಾಧಿಕಾರಿಯ ಮನೆಯಲ್ಲಿ ಇದ್ದಾಳೆ. ಮುಂದಿನ ಚುನಾವಣೆ ನನ್ನ ಕೊನೆ ಚುನಾವಣೆಯಾಗಲಿದ್ದು, 5 ವರ್ಷದಲ್ಲಿ ಡಿಕೆಶಿ ಅವರನ್ನ ಮುಗಿಸುತ್ತೇನೆ, ಅರೆಸ್ಟ್ ಮಾಡಿಸುತ್ತೇನೆ ಎಂದು ಶಪಥ ಮಾಡಿದ್ದಾರೆ.

ಇನ್ನೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ `ವಿಷಕನ್ಯೆ’ ಪದ ಬಳಸಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಚನ್ನರಾಜ್ ಹಟ್ಟಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಹೆಬ್ಬಾಳ್ಕರ್ ಅವರ ವಿರುದ್ಧ `ವಿಷಕನ್ಯೆ’ ಪದ ಬಳಕೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ. ಇಂಥ ಪದ ಬಳಸಲು ಅವರಿಗೆ ಕಾಮನ್ ಸೆನ್ಸ್ ಇಲ್ಲ. ಗೋಕಾಕ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳಿದ್ದಾರೆ. ಅಲ್ಲಿನ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.