ಉಡುಪಿ:ವೀಕೆಂಡ್ ಲಾಕ್ ಡೌನ್ ಗೆ ಉತ್ತಮ ಬೆಂಬಲ.

136
firstsuddi

ಉಡುಪಿ : ಕೋವಿಡ್ ನಿಯಂತ್ರಣ ಹಿನ್ನಲೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜಿಲ್ಲೆ ಸಂಪೂರ್ಣ ಸ್ಥಬ್ದಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಜನಸಂಖ್ಯೆ ಸಂಪೂರ್ಣ ವಿರಳವಾಗಿದೆ.

ಖಾಸಗಿ ಹಾಗೂ ಸರಕಾರಿ ಬಸ್ಸುಗಳು ಒಡಾಡವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದು ಹೆದ್ದಾರಿ ಸೇರಿದಂತೆ ಒಳರಸ್ತೆಗಳಲ್ಲಿ ಬೆರಳೆಣಿಕೆಯ ವಾಹನಗಳು ಸಂಚರಿಸುತ್ತಿವೆ.

ಅಗತ್ಯ ಸೇವೆಗಳನ್ನು ಒದಗಿಸುವ ಔಷಧ ಅಂಗಡಿಗಳು, ದಿನಸಿ ಅಂಗಡಿಗಳು, ಬೇಕರಿ, ತರಕಾರಿ, ಹಣ್ಣಿನ ಅಂಗಡಿ, ಹೋಟೆಲ್, ಹಾಲಿನ ಕೇಂದ್ರಗಳು, ಕಟ್ಟಡ ನಿರ್ಮಾಣ ಸಾಮಗ್ರಿಗಳ ಮಳಿಗೆ, ಕೃಷಿ ಪರಿಕರಗಳು, ಸೆಲೂನ್ ಸೇರಿದಂತೆ ಸರ್ಕಾರ ಪಟ್ಟಿ ಮಾಡಿರುವ ಮಳಿಗೆಗಳು ಮಾತ್ರ ತೆರೆದಿದ್ದು, ಎಲೆಕ್ಟ್ರಾನಿಕ್ಸ್, ಪಾತ್ರೆ, ಮೊಬೈಲ್, ಚಿನ್ನಾಭರಣ, ಪಾದರಕ್ಷೆಗಳು, ಹಾರ್ಡ್ವೇರ್ ಅಂಗಡಿಗಳು ಬಂದ್ ಆಗಿದ್ದವು.

ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಬರಲು ಅವಕಾಶ ಇದ್ದಿದ್ದರಿಂದ ಅನಗತ್ಯವಾಗಿ ಓಡಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದಾರೆ. ರಸ್ತೆಗಳಲ್ಲಿ ಓಡಾಡುವ ವಾಹನಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ಮಾರುಕಟ್ಟೆ, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.