ವಿಡಿಯೋಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧನ…

52
firstsuddi

ಮುಂಬೈ : ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಕಾನ್ ಗ್ರೂಪ್ ನ ಸಿಇಒ ವೇಣುಗೋಪಾಲ್ ಧೂತ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಮುಂಬೈನಲ್ಲಿ ಬಂಧಿಸಿದೆ.

ಇದಕ್ಕೂ ಮೊದಲು ಡಿಸೆಂಬರ್ 23ರಂದು ಐಸಿಐಸಿಐ ಬ್ಯಾಂಕ್ ನ ಮಾಜಿ ಎಂಡಿ ಚಂದಾ ಕೊಚ್ಚಾರು ಹಾಗೂ ಪತಿ ದೀಪಕ್ ಕೊಚ್ಚಾರ್ ದಂಪತಿಯನ್ನು ಬಂಧಿಸಲಾಗಿತ್ತು. ಅವರಿಬ್ಬರೂ ಸದ್ಯ ಸಿಬಿಐ ವಶದಲ್ಲಿದ್ದಾರೆ. ಇತರನ್ನು ಇಂದು ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸಿಬಿಐ, ಕೊಚಾರ್ಸ್ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚಾರು, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ವಹಿಸುತ್ತಿರುವ ನುಪವರ್ ರಿನ್ಯೂವಬಲ್ಸ್ ಕಂಪನಿಗಳ ಮೇಲೆ ಆರೋಪ ಹೊರಿಸಲಾಗಿದೆ. 

2009ರ ಜೂನ್ ನಿಂದ 2011ರ ಅಕ್ಟೋಬರ್ ಅವಧಿಯಲ್ಲಿ ವಿಡಿಯೋಕಾನ್ ಗ್ರೂಪ್ ಮತ್ತು ಅದರ ಅಂಗಸಂಸ್ಥೆಗಳಿಗೆ ಐಸಿಐಸಿಐ ಬ್ಯಾಂಕ್ ನಿಂದ ಅಕ್ರಮವಾಗಿ ಸುಮಾರು 3,250 ಕೋಟಿ ರೂ. ಸಾಲ ನೀಡಲಾಗಿತ್ತು ಎಂಬ ಆರೋಪ ದಾಖಲಾಗಿದ್ದು, ಆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.