ಚೆನೈ: ನಟ ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾದ ರಿಲೀಸ್‍ಗೆ ಕಾದಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ಬಿಡುಗಡೆ ಆಗುತ್ತಿದೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ರಿಲೀಸ್ ಸಂದರ್ಭದಲ್ಲಿ ರಜನಿಕಾಂತ್‍ಗೆ ಅನಾರೋಗ್ಯ ಆಗಿದೆ. ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಅವರ ನಟನೆಯ ‘ವೆಟ್ಟೈಯಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದೆ. ರಜನಿಕಾಂತ್ ಅವರಿಗೆ ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.
ಇಂದು ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್‍ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ. ಅವರ ಕಡೆಯಿಂದ ಆರೋಗ್ಯದ ಬಗ್ಗೆ ಅಪ್‍ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಮೊದಲು ಕೂಡ ರಜನಿಕಾಂತ್ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಈ ರೀತಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಆತಂಕ ಹೆಚ್ಚಿದೆ. ಆದಾಗ್ಯೂ ಅವರು ಸಿನಿಮಾ ಕೃಷಿಯನ್ನು ನಿಲ್ಲಿಸಿಲ್ಲ ಅನ್ನೋದು ವಿಶೇಷ.










