ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಇಂದು ಹೊಸ ದಾಖಲೆಯನ್ನು ಬರೆಯಲಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಲಾಗಿದೆ. ಪರಿಣಾಮ 38.5 ಓವರ್ ಗಳಲ್ಲಿ ಕೇವಲ 162 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ ಆಲೌಟ್ ಆಗಿದೆ. ಭಾರತದ ವೇಗಿ ರೇಣುಕಾ ಸಿಂಗ್ ನಾಲ್ಕು ವಿಕೆಟ್ ಪಡೆದರೆ, ದೀಪ್ತಿ ಶರ್ಮಾ ಆರು ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿಗೆ ಭದ್ರ ಬುನಾದಿಯನ್ನು ಹಾಕಿದರು. ವೆಸ್ಟ್ ಇಂಡೀಸ್ ನೀಡಿದ 163 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ತಂಡದ ಪರ ಆರಂಭಿಕರಾಗಿ ಅಂಕಣಕಿಳಿದ ಸ್ಮತಿ ಮಂಧಾನ ಕೇವಲ 4 ರನ್ ಗಳಿಗೆ ಕ್ಯಾಚ್ ನೀಡಿ ನಿರ್ಗಮಿಸುವ ಮೂಲಕ ನಿರಾಸೆಯನ್ನು ಮೂಡಿಸಿದ್ದರು. ಬಳಿಕ ಪ್ರತಿಕಾ ರಾವಲ್ 18, ನಾಯಕಿ ಹರ್ಮನ್ ಪ್ರೀತ್ ಕೌರ್ 32, ರೋಡ್ರಿಗಸ್ 29, ದೀಪ್ತಿ ಶರ್ಮಾ ಅಜೇಯ 39, ರಿಚಾ ಘೋಶ್ 23 ರನ್ ಗಳಿಸುವ ಮೂಲಕ 28.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸುವ ಮೂಲಕ ಗೆಲುವನ್ನು ಸಾಧಿಸಲಾಯಿತು.










