ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ – ಇಬ್ಬರು ವಿದ್ಯಾರ್ಥಿನಿಯರು ಸೇರಿ ನಾಲ್ವರ ರಕ್ಷಣೆ…

114
firstsuddi

ಮಂಗಳೂರು : ನಗರದ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಬಂಧಿಸಿದ್ದಾರೆ.

ಆಯಿಷಮ್ಮ, ಶಮೀನಾ, ಸಿದ್ದೀಕ್ ಬಂಧಿತ ಆರೋಪಿಗಳು. ಇನ್ನೂ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಸೇರಿ ಮತ್ತಿಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಆರೋಪಿಗಳು ಯುವತಿಯರಿಗೆ ಬೆದರಿಕೆ, ಆಮಿಷಗಳನ್ನೊಡ್ಡಿ ವೇಶ್ಯಾವಾಟಿಕೆಗೆ ಪ್ರೇರೇಪಿಸಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತೆಯೊಬ್ಬಳು ಈ ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿರುವ ವಿಚಾರ ಆಕೆಯ ಕಾಲೇಜಿನ ಪ್ರಾಂಶುಪಾಲೆಗೆ ತಿಳಿದು ಅವರು ಚೈಲ್ಡ್ ಕೇರ್​​ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಪ್ರಕರಣ ಬಯಲಿಗೆ ಬಂದಿದೆ. ಈ ಕುರಿತು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆ, ಐ.ಟಿ.ಪಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.