ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ : ಸುಪ್ರೀಂ ಮಹತ್ವದ ಆದೇಶ…

77
firstsuddi

ನವದೆಹಲಿ : ದೇಶದಲ್ಲಿ ನಡೆಯುವ ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಒಪ್ಪಿಗೆಯೊಂದಿಗೆ ಈ ಕೆಲಸ ಮಾಡುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಲ್. ನಾಗೇಶ್ವರರಾವ್ ಅವರಿದ್ದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನುಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಅಡಿ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಎಲ್ಲ ಪ್ರಕರಣಗಳಿಗೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆ ವಯಸ್ಕ ಮತ್ತು ಸಮ್ಮತಿಯೊಂದಿಗೆ ಉದ್ಯೋಗದಲ್ಲಿ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾದರೆ ಪೊಲೀಸರು ಹಸ್ತಕ್ಷೇಪ ಮಾಡಬಾರದು.

ಸಂವಿಧಾನದ 21ನೇ ಪರಿಚ್ಛೇದದ ಅಡಿ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತ ಜೀವನ ನಡೆಸುವ ಹಕ್ಕಿದೆ. ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು ಅಥವಾ ಶಿಕ್ಷಿಸಬಾರದು. ವೇಶ್ಯಾಗೃಹಗಳ ಮೇಲೆ ದಾಳಿ ಮಾಡುವಾಗ ಅವರಿಗೆ ಕಿರುಕುಳ ನೀಡಬಾರದು ಎಂದು ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಸೂಚನೆ ನೀಡಿದೆ.