ವೈದ್ಯಕೀಯ ಶಿಕ್ಷಣಕ್ಕಾಗಿ ಹೆಚ್ಚಿನ ವಿದ್ಯಾರ್ಥಿಗಳು ಉಕ್ರೇನ್‍ಗೆ ಯಾಕೆ ಹೋಗ್ತಾರೆ ಗೊತ್ತಾ?

61
firstsuddi

ನವದೆಹಲಿ : ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚಿನ ವಿದ್ಯಾರ್ಥಿಗಳು ಉಕ್ರೇನ್ ಗೆ ಯಾಕೆ ಹೋಗುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಉಕ್ರೇನ್ ನಲ್ಲಿ ಭಾರತಕ್ಕಿಂತ ಅತಿ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ದೊರೆಯುತ್ತದೆ ಎಂಬ ಕಾರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಮ ವರ್ಗದ ವಿದ್ಯಾರ್ಥಿಗಳು ಉಕ್ರೇನ್​ಗೆ ತೆರಳುತ್ತಾರೆ. ಅಲ್ಲದೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡರೆ ಉಕ್ರೇನ್ ನಲ್ಲಿ ಸೀಟ್ ಪಡೆಯುವುದು ಸುಲಭದ ಕೆಲಸ.

ಉಕ್ರೇನ್ ನಲ್ಲಿ ವಿದ್ಯಾರ್ಥಿಗಳ ಜೀವನ ವೆಚ್ಚ ಅಗ್ಗವಾಗಿರುವುದರಿಂದ ಇಲ್ಲಿಗೆ ಎಷ್ಟೋ ಜನರು ಶಿಕ್ಷಣ ಪಡೆಯಲು ಬರುತ್ತಾರೆ. ಇದರ ಜೊತೆಗೆ ಇಲ್ಲಿನ ವೈದ್ಯಕೀಯ ವಿಶ್ವವಿದ್ಯಾನಿಲಯಗಳು ಪ್ರಪಂಚದಲ್ಲೇ ಮನ್ನಣೆ ಪಡೆದ ವಿಶ್ವವಿದ್ಯಾನಿಲಯಗಳಾಗಿವೆ. ಹೀಗಾಗಿ ಭಾರತದ ಜೊತೆಗೆ ಇತರೆ ದೇಶಗಳ ವಿದ್ಯಾರ್ಥಿಗಳನ್ನ ಸೆಳೆಯುತ್ತವೆ.