ವೈದ್ಯರ ನಿರ್ಲಕ್ಷ್ಯ ಆರೋಪ : ಗರ್ಭಿಣಿ ಸಾವು…

203
Firstsuddi

ದಾವಣಗೆರೆ : ವೈದ್ಯರ ನಿರ್ಲಕ್ಷ್ಯದಿಂದಾಗಿ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಕಾವ್ಯ (21) ಸಾವನ್ನಪ್ಪಿದ ಗರ್ಭಿಣಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನಿಲವಂಜಿ ಗ್ರಾಮದ ನಿವಾಸಿಯಾದ ಕಾವ್ಯಳಿಗೆ ಮದುವೆಯಾಗಿ ಒಂದು ವರ್ಷವಾಗಿದ್ದು, ಚೊಚ್ಚಲ ಹೆರಿಗೆಗಾಗಿ ರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದ್ದರು. ವೈದ್ಯರು ಮೊದಲು ಸಿಸೇರಿಯನ್ ಮಾಡಬೇಕೆಂದರು. ಇದಕ್ಕೆ ಪಾಲಕರ ಒಪ್ಪಿಗೆಯನ್ನು ಪಡೆದುಕೊಂಡಿದ್ದಾರೆ. ನಂತರ ಇಲ್ಲ ನಾರ್ಮಲ್ ಆಗುತ್ತದೆ ಎಂದು ತಿಳಿಸಿದರು. ಈ ವೇಳೆ, ವೈದ್ಯರು ಹಾಗೂ ನರ್ಸ್ ಗಳು ಬಲವಂತವಾಗಿ ನಾರ್ಮಲ್ ಡೆಲಿವರಿ ಮಾಡಿಸಲು ಪ್ರಯತ್ನಿಸಿದ್ದು, ಗರ್ಭಿಣಿ ಕಾವ್ಯ ಹೊಟ್ಟೆಯನ್ನು ಜೋರಾಗಿ ಒತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕಾವ್ಯ ಹಾಗೂ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು  ಪರಿಸ್ಥಿತಿ ತಿಳಿಗೊಳಿಸಿದ್ದಾರೆ.