ಬರ್ಮಿಂಗ್ ಹ್ಯಾಮ್: ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ ಝಾಯಿ ಅವರು 24 ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಮಲಾಲಾ ತನ್ನ ಸಾಮಾಜಿಕ ಜಾಲತಾಣದ ಮೂಲಕ ವಿಷಯ ಹಂಚಿಕೊಂಡಿದ್ದಾರೆ.
ಇಂದು ನನ್ನ ಜೀವನದಲ್ಲಿ ಬಹಳ ಮುಖ್ಯವಾದ ದಿನ. ಅಸ್ಸರ್ ಜೊತೆ ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇನೆ. ಬರ್ಮಿಂಗ್ ಹ್ಯಾಮ್ ನಲ್ಲಿರುವ ನಮ್ಮ ಮನೆಯಲ್ಲಿ ಎರಡೂ ಕುಟುಂಬಗಳ ಸಮ್ಮುಖದಲ್ಲಿ ನಾವು ಸಾಧಾರಣ ನಿಖಾ ಸಮಾರಂಭವನ್ನು ನಡೆಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿದ್ದೇವೆ ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.
2012 ರಲ್ಲಿ ಪಾಕಿಸ್ತಾನ ಸರ್ಕಾರ ಆಕೆಗೆ ಮೊದಲ ರಾಷ್ಟ್ರೀಯ ಯುವ ಶಾಂತಿ ಪ್ರಶಸ್ತಿಯನ್ನು ನೀಡಿತು. ಡಿಸೆಂಬರ್ 2014 ರಲ್ಲಿ, ತಮ್ಮ 17ನೇ ವಯಸ್ಸಿನಲ್ಲಿ ಅತ್ಯಂತ ಕಿರಿಯ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತಳಾದರು. ಮಲಾಲಾ ಪಾಕಿಸ್ತಾನದಲ್ಲಿ ಸ್ತ್ರೀ ಶಿಕ್ಷಣದ ಮೇಲೆ ತಾಲಿಬಾನ್ ನಿರ್ಬಂಧಗಳನ್ನು ವಿರೋಧಿಸಿದ್ದಕ್ಕಾಗಿ 2012 ರಲ್ಲಿ ಈಕೆಯ ಮೇಲೆ ಗುಂಡಿನ ದಾಳಿ ನಡೆಯಿತು.










