ವ್ಯಾಪಕ ವಿರೋಧ : ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು…

46
firstsuddi

ಮಂಗಳೂರು : ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ಅವರ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ರುದ್ದುಗೊಳಿಸಲಾಗಿದೆ.

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಕಾರದಿಂದ ಚಿಂತನಾ ಗಂಗಾದಿಂದ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲಿನ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ಇಂದು ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಿದ್ದರು.

ಆದರೆ ಪಠ್ಯ ಪರಿಷ್ಕರಣೆ ವಿವಾದದಿಂದ ಎಡಪಂಥೀಯ ಸಂಘಟನೆಗಳು ಸನ್ಮಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಜೊತೆಗೆ ಸನ್ಮಾನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದವು. ಈ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮ ರದ್ದುಪಡಿಸಲಾಗಿದೆ.