ವ್ಯಾಪಾರಕ್ಕೆ ನಿಷೇಧ – ಪೇಜಾವರ ಶ್ರೀ ಭೇಟಿಯಾದ ಮುಸ್ಲಿಂ ವರ್ತಕರು…

66
firstsuddi

ಉಡುಪಿ : ನಗರದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿ ಮುಸಲ್ಮಾನ ನಾಯಕರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ನಗರದಲ್ಲಿ ಸೌಹಾರ್ದ ವಾತಾವರಣ ನೆಲೆಸುವಂತೆ, ಹಿಂದೂಗಳು ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಮುಸ್ಲಿಂ ವ್ಯಾಪಾರಿಗಳು ಇಂದು ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನೀಷೇಧ ಹೇರಿರುವುದದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ತುಂಬಾ ಸಮಸ್ಯೆಯಾಗಿದೆ ಆದ್ದರಿಂದ ಸ್ವಾಮೀಜಿಗಳು ಮಧ್ಯಪ್ರವೇಶಿಸಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ತಮ್ಮನ್ನು ಭೇಟಿ ಮಾಡಿ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ನೆಮ್ಮದಿ ಅವಶ್ಯಕವಾಗಿ ಬೇಕು ಆದರೆ ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದ್ದು ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಇಂದು ನೋವಿನಲ್ಲಿದೆ ಎಂದು ಮಾತುಕತೆಯ ಬಳಿಕ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. 

ಕೇವಲ ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಬದಲಾಗಿ ಇದಕ್ಕೆ ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಇಂದು ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು ಎಂದರು.