ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ನೇತೃತ್ವದ ಪಂಚ ಸದಸ್ಯರ ಪೀಠ ಹೇಳಿದ್ದು, 2019ರ ಜನವರಿ 22 ರಂದು ವಿಚಾರಣೆ ಆರಂಭವಾಗಲಿದೆ.










