ಶಬರಿಮಲೆ ಪ್ರಕರಣ-ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ…

298
firstsuddi

ನವದೆಹಲಿ : ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎನ್ನುವ ಸುಪ್ರೀಂ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದ್ದು, ಅರ್ಜಿ ವಿಚಾರಣೆಯನ್ನು 7ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. ರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ಸಾಂವಿಧಾನಿಕ ಪೀಠ ಶಬರಿಮಲೆ ವಿಚಾರ ಕೇವಲ ಹಿಂದೂ ಧರ್ಮದ ದೇವಾಲಯಕ್ಕೆ ಮಾತ್ರ ಸೀಮಿತವಾಗಿಲ್ಲ. ಮುಸ್ಲಿಂ ಧರ್ಮದ ಮಹಿಳೆಯರ ಮಸೀದಿ ಪ್ರವೇಶಕ್ಕೂ ಅನ್ವಯವಾಗುತ್ತದೆ. ಹೀಗಾಗಿ ಈ ಪ್ರಕರಣದ ಬಗ್ಗೆ ದೀರ್ಘವಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ಸಿಜಿಐ ದೀಪಕ್ ಮಿಶ್ರಾ ಅವರ ನೇತೃತ್ವದ ಐವರು ಸದಸ್ಯರ ಪೀಠ ತೀರ್ಪ ನೀಡಿತ್ತು. ಕೋರ್ಟ್‍ನ ಈ ತೀರ್ಪಿನಿಂದಾಗಿ ದೇಶಾಧ್ಯಂತ ಪರ ವಿರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿತ್ತು.