ಕೇರಳ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‍ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಂಚೇರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮಂಚೇರಿ ವೈದ್ಯಕೀಯ ಕಾಲೇಜಿನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಕುರಿತು ಪ್ರತಿಕ್ರಿಯಿಸಿರುವ ಮಲಪ್ಪುರಂ ಪೊಲೀಸರು, ಅಪಘಾತದ ಸ್ಥಳವನ್ನು ಸರಿಯಾಗಿ ಪರಿಶೀಲಿಸಿ ರಸ್ತೆಯಲ್ಲಿ ಏನಾದರೂ ಸಮಸ್ಯೆಗಳಿವೆಯೇ ಎಂಬುದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.










