ಶರ್ಟ್ ಧರಿಸದೇ ಸಭೆಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು…

77
firstsuddi

ಲಕ್ನೋ: ಶರ್ಟ್ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್, ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ಇಲಾಖಾ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕರೆದಿದ್ದರು. ಈ ಸಭೆಗೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಶರ್ಟ್ ಹಾಕದೆ, ಬನಿಯನ್ ಧರಿಸಿ ಬಂದಿದ್ದರು.

ಇದನ್ನು ಗಮನಿಸಿದ ವಿಜಯ್ ಕಿರಣ್ ಆನಂದ್ ಅವರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಬನಿಯನ್ ಧರಿಸಿ ವಿಡಿಯೋ ಕಾನ್ಫರೆನ್ಸ್ ಸಭೆಗೆ ಹಾಜರಾಗಿರುವುದನ್ನು ಅನುಚಿತ ವರ್ತನೆ ಎಂದು ಪರಿಗಣಿಸಿ ಕೆಲಸದಿಂದ ಅಮಾನತು ಮಾಡಲಾಗಿದೆ. ಆದರೆ ಅಮಾನತುಗೊಂಡಿರುವ ಅಧಿಕಾರಿ ಯಾವ ಜಿಲ್ಲೆಯವರು ಎಂಬುದು ಬಹಿರಂಗವಾಗಿಲ್ಲ.