ತುಮಕೂರು: ಮಹಿಳೆಯ ಹೊಟ್ಟೆಯಲ್ಲಿದ್ದ 11.5 ಕೆ.ಜಿ. ತೂಕದ ಗೆಡ್ಡೆಯನ್ನು ಜಿಲ್ಲೆಯ ತಿಪಟೂರು ಪಟ್ಟಣದ ಕುಮಾರ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗಿದಿದ್ದಾರೆ.
ತಿಪಟೂರು ಪಟ್ಟಣದ ಗಾಂಧಿನಗರದ 45 ವರ್ಷದ ಮಹಿಳೆ ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ತಪಾಸಣೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿದೆ. ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಕುಮಾರ್ ಆಸ್ಪತ್ರೆಯ ವೈದ್ಯರಾದ ಡಾ.ಶ್ರೀಧರ್ ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ 11.5 ಕೆ.ಜಿ. ತೂಕದ ಗೆಡ್ಡೆಯನ್ನು ಹೊರ ತೆಗೆದಿದ್ದು, ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.










