ಚಾಮರಾಜನಗರ : ಕೊರೊನಾ ಹೆಚ್ಚಳ ಹಿನ್ನಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಶಾಲಾ ಮಕ್ಕಳಿಗೆ ಇನ್ನೂ ಲಸಿಕೆ ನೀಡಿಲ್ಲ. ಲಸಿಕೆ ಹಾಕದೇ ಶಾಲೆ ಪ್ರಾರಂಭ ಮಾಡಿದ್ದು ಸರಿಯಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ನೀಡಬೇಕು ಎಂದು ಆಗ್ರಹಿಸಿದರು.










