ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ ; ಆದೇಶ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ…

73
firstsuddi

ಬೆಂಗಳೂರು : ಈ ವರ್ಷ ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ. ಸ್ವಾತಂತ್ರ್ಯ ದಿನದ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು, ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯ ಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.