ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ : ಸಿಎಂ.

91
firstsuddi

ಬೆಂಗಳೂರು : ಶಾಲೆಗಳಿಗೆ ಕೇಸರಿ ಬಣ್ಣ ವಿಚಾರವಾಗಿ ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಸಿಎಂ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಮಾತನಾಡಿದ ಬೊಮ್ಮಾಯಿ, ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ. ಇದು ಬಹಳ ಕೆಳಹಂತಕ್ಕೆ ಹೋಗುತ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಬಾವುಟದಲ್ಲೇ ಇದೆ. ಕೇಸರಿ ಕಂಡರೆ ಅವರಿಗೆ ಯಾಕೆ ಅಷ್ಟೊಂದು ಅಲರ್ಜಿ? ಎಂದು ಪ್ರಶ್ನೆ ಮಾಡಿದರು.

ಸ್ವಾಮಿ ವಿವೇಕಾನಂದ ಒಬ್ಬ ಸನ್ಯಾಸಿ. ಅವರು ತೊಡುತ್ತಿದ್ದ ಎಲ್ಲಾ ವಸ್ತ್ರಗಳೂ ಕೇಸರಿ. ಹೀಗಾಗಿ ಅವರ ಹೆಸರಿನಲ್ಲಿ ಮಾಡುತ್ತಿರುವ ಯೋಜನೆಯಾದ್ದರಿಂದ ಶಾಲೆಗಳ ಕೊಠಡಿಗೆ ಕೇಸರಿ ಬಣ್ಣ ಹಚ್ಚಲಾಗುತ್ತಿದೆ. ಅದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದರು.