ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ : ರಘುಪತಿ ಭಟ್.

163
firstsuddi

ಉಡುಪಿ : ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ ಎಂದು ಹೇಳುವುದರ ಮೂಲಕ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಗೆ ಉಡುಪಿ ಶಾಸಕ ರಘುಪತಿ ಭಟ್ ಬೆಂಬಲಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮೊಟ್ಟೆ ಕೊಟ್ಟ ಕೂಡಲೇ ಮೊಟ್ಟೆಯನ್ನು ತಿನ್ನಲೇಬೇಕು ಅಂತ ಇಲ್ಲ. ಆದ್ದರಿಂದ ಕೊಟ್ಟರೆ ತಪ್ಪು ಎಂದು ನನಗೆ ಅನಿಸುವುದಿಲ್ಲ. ಸಣ್ಣ ಪ್ರಾಯದಲ್ಲಿ ಮಕ್ಕಳು ಸಸ್ಯಹಾರಿ ಇದ್ದರೆ ಸಸ್ಯಹಾರಿಯಾಗಿಯೇ ಇರುತ್ತಾರೆ, ಬೆಳೆದು ದೊಡ್ಡವರಾದ ಮೇಲೆ ಅವರು ಬದಲಾಗುವುದು. ಕೆಲವೊಮ್ಮೆ ಸಸ್ಯಹಾರಿ ಗಳಿಗೆ ಮೊಟ್ಟೆ ತಿನ್ನುವುದನ್ನು ನೋಡುವಾಗ ಬೇರೆ ತರನಾದ ಭಾವನೆಗಳು ಬರಬಹುದು ಆದ್ದರಿಂದ ಶಾಲೆಯಲ್ಲಿ ಮೊಟ್ಟೆಯನ್ನು ಕೊಡುವ ಸಂದರ್ಭದಲ್ಲಿ ಪ್ರತ್ಯೇಕವಾಗಿ ಕೊಡುವ ವ್ಯವಸ್ಥೆ ಮಾಡಬಹುದು. ಯಾರೋ ವಿರೋಧಿಸುತ್ತಾರೆ ಎಂಬ ಕಾರಣಕ್ಕಾಗಿ ಮೊಟ್ಟೆ ಕೊಡದೇ ಇರುವುದು ಸೂಕ್ತವಾದ ನಿರ್ಧಾರವಲ್ಲ. ಇತರ ಮಕ್ಕಳು ಮೊಟ್ಟೆ ತಿನ್ನುವುದನ್ನು ನೋಡಿ ಮಕ್ಕಳು ಪ್ರಭಾವಿತರಾಗುವುದು ಇಲ್ಲ ಎಂದು ಹೇಳಿದರು.