ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ.

66

ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ಡ್ಯಾನಿಶ್ ಮತ್ತು ಅಮೀನ್ ಎಂದು ಗುರುತಿಸಲಾಗಿದ್ದು, ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದರು. ಆಕೆಯನ್ನು ಲಕ್ನೋದ ಕೃಷ್ಣನಗರದ ಹೋಟೆಲ್‍ಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಬ್ಯಾಗನ್ನು ಕಸಿದುಕೊಂಡು ಕಾರಿನೊಳಗೆ ಎಳೆದೊಯ್ದು ಕೃಷ್ಣಾನಗರದ ಹೋಟೆಲ್‍ಗೆ ತೆರಳಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಅಶ್ಲೀಲ ಚಿತ್ರಗಳು ಮತ್ತು ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಘಟನೆಯನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ನಂತರ ಇಬ್ಬರೂ ಕಾರಿನಲ್ಲಿ ಕರೆದೊಯ್ದು ಮನೆಯ ಬಳಿ ಎಸೆದಿದ್ದರು, ಆಕೆಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಲಕ್ನೋ ದಕ್ಷಿಣ ವಲಯ ಪೊಲೀಸ್ ಉಪ ಆಯುಕ್ತ ಕೇಶವ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು ಹೋಟೆಲ್‍ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಶಪಡಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.