ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ – ಆತಂಕದಲ್ಲಿ ಕುಟುಂಬಸ್ಥರು…

70
firstsuddi

ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ ನಾಪತ್ತೆಯಾದವರು. ಭಾನುವಾರದಿಂದ ನಾಪತ್ತೆಯಾಗಿರುವ ಚಂದ್ರಶೇಖರ್ ಇನ್ನೂ ಪತ್ತೆಯಾಗಿಲ್ಲವಂತೆ. ಜಿಲ್ಲೆಯ ಹೊನ್ನಾಳಿಯಲ್ಲಿ ನಿನ್ನೆ ಫೋನ್ ಸ್ವಿಚ್ಛ್ ಆಫ್ ಆಗಿದ್ದು, ಕುಟುಂಬಸ್ಥರಲ್ಲಿ ಭಯವನ್ನುಂಟು ಮಾಡಿದೆ. ಚಂದ್ರಶೇಖರ್ ತಾಯಿ ಉಮಾ ಜಿಲ್ಲಾ ಪಂಚಾಯ್ತಿಯ ಮಾಜಿ ಅಧ್ಯಕ್ಷೆಯಾಗಿದ್ದು, ತಂದೆ ಎಂ.ಪಿ.ರಮೇಶ್ ಕ್ಲಾಸ್ ಒನ್ ಕಂಟ್ರಾಕ್ಟರ್ ಆಗಿದ್ದರು. ಯಾವಾಗಲೂ ಕೂಡ ಎಂಪಿ ರೇಣುಕಾಚಾರ್ಯ ಜೊತೆ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

ಎರಡು ದಿನದಿಂದ ಹುಡುಕಿದರೂ ಚಂದ್ರಶೇಖರ್ ಸುಳಿವು ಸಿಗದಿದ್ದಕ್ಕೆ ಆತಂಕಗೊಂಡ ಕುಟುಂಬಸ್ಥರು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಹ ಚಂದ್ರಶೇಖರ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಯಾವಾಗಲೂ ಎಲ್ಲಿ ಹೋದರು ಕೂಡ ಸ್ನೇಹಿತರೊಂದಿಗೆ ಹೋಗುತ್ತಿದ್ದ ಚಂದ್ರು, ಈ ಬಾರಿ ಒಬ್ಬನೇ ಹೋಗಿರುವುದು ಕೂಡ ಮತ್ತಷ್ಟು ಆತಂಕ ಮನೆ ಮಾಡಿದೆ.