ಕಲಬುರಗಿ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಪ್ರಿಯಾಂಕ್ ಖರ್ಗೆ ಭಾವಚಿತ್ರ ಇರುವ ಪೋಸ್ಟರ್ ನ್ನು ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವು ಕಡೆ ಅಂಟಿಸಿದ್ದಾರೆ.
ಕಳೆದ ಅಕ್ಟೋಬರ್ 18 ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದರು. ತದನಂತರ ಕ್ಷೇತ್ರಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಖರ್ಗೆ ವಿರುದ್ಧ ಗ್ರಾಮದ ಬಿಜೆಪಿ ಮುಖಂಡರು ಸಿಡಿದೆದ್ದಿದ್ದಾರೆ.
ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರಾದರೂ ಚಿತ್ತಾಪುರ ದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೇ ಚಿತ್ತಾಪುರ ಕ್ಷೇತ್ರಕ್ಕೆ ಬೇಟಿ ನೀಡುವಂತೆ ತಿಳಿಸಿ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.










