ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್..!

93
Firstsuddi

ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಇಂದು ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಏಪ್ರಿಲ್ 1ರಂದು ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಏಪ್ರಿಲ್ 4ರಂದು ರಾತ್ರಿ 10.30ರ ಸುಮಾರಿಗೆ ತೀವ್ರ ಉಸಿರಾಟದ ಸಮಸ್ಯೆ ಹಿನ್ನಲೆ ಜಾರಕಿಹೊಳಿಯವರು ಗೋಕಾಕ್ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಸ್ಪಷ್ಟನೆ ನೀಡಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರಿಗೆ ಬಿಪಿ, ಶುಗರ್ ಕಂಟ್ರೋಲ್ ಆಗಿರುವುದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿರುವ ರಮೇಶ್ ಜಾರಕಿಹೊಳಿ ಅವರಿಗೆ ಮನೆಯಲ್ಲೇ ಕ್ವಾರೆಂಟೈನ್ ಆಗಲು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಸೂಚಿಸಿದ್ದಾರೆ.